Tag Archives: BJP

ಸಾಲ ಮನ್ನಾ ಮಾಡುವಂತೆ ಸಂಸದ ಪ್ರತಾಪ್‌ ಸಿಂಹ ಕಚೇರಿ ಎದುರು ರೈತರ ಪ್ರತಿಭಟನೆ

ಮೈಸೂರು: ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಸಂಸದ ಪ್ರತಾಪ ಸಿಂಹ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಜನಶಕ್ತಿ ಸಂಘಟನೆ ರೈತರಿಂದ ಪ್ರತಿಭಟನೆ ನಡೆಸಲಾಯಿತು.ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ತೀವ್ರ ಬರಗಾಲದಿಂದ ಕಂಗೆಟ್ಟಿರುವ ರೈತರು ಬೆಳೆನಷ್ಟ ಹಾಗೂ ಸಾಲಕ್ಕೆ ಹೆದರಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ¸ ಸರ್ಕಾರ ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಬೇಕೆಂದು ಒತ್ತಾಯಿಸಿದರು.ಖಾಸಗಿ ಕಂಪನಿಗಳಿಗೆ ಉದಾರತೆ ತೋರಿ ಸಾಲ ಮನ್ನಾ ಮಾಡುವ ಪ್ರಧಾನಿ ಮೋದಿ, ದೇಶದ ಬೆನ್ನೆಲುಬಾದ ರೈತರ ಬಗ್ಗೆ ಕಾಳಜಿ ತೋರಲು ಮನಸ್ಸು ಮಾಡುತ್ತಿಲ್ಲ. ರೈತರ ಬಗ್ಗೆ ಮಾತನಾಡುವ ಪ್ರಧಾನಿ ರೈತರ ಕಷ್ಟ ಅರಿಯಬೇಕಿದೆ ಎಂದು ಕಿಡಿಕಾರಿದರು.ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿದ ಪ್ರತಾಪ್ ಸಿಂಹ, ಬೆಂಗಳೂರಿನಲ್ಲಿ ಸ್ಟೀಲ್ ಬ್ರಿಡ್ಜ್ ಮಾಡಲು ಉತ್ಸುಕವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ರೈತರ ಪರ ಕಾಳಜಿ ವಹಿಸುತ್ತಿಲ್ಲ. ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ. ಕೇಂದ್ರದ ಮೇಲೆ ಒತ್ತಡ ತಂದು ನಾವು ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದರು.

Source: ಸಾಲ ಮನ್ನಾ ಮಾಡುವಂತೆ ಸಂಸದ ಪ್ರತಾಪ್‌ ಸಿಂಹ ಕಚೇರಿ ಎದುರು ರೈತರ ಪ್ರತಿಭಟನೆ

Advertisements